ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪ್ರಮೋಷನ್ ವಿಡಿಯೋ ಬಿಡುಗಡೆ
ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಆಟಿಕೂಟ ಆಚರಣೆ, ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರಮೋಷನ್ ವಿಡಿಯೋ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು ಅವರು ಜನತಾ ವಿದ್ಯಾಸಂಸ್ಥೆಗಳ ಪ್ರಮೋಷನ್ ವಿಡಿಯೋವನ್ನು ಬಿಡುಗಡೆಗೊಳಿಸಿದರು. ವಿವಿಧ ಸಂಘಗಳ ವಾರ್ಷಿಕ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಡಿ. ಶ್ರೀನಿವಾಸ್ ಶುಭಾಶಂಸನೆಗೈದರು. ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ರಘುರಾಮ ಶಾಸ್ತ್ರಿ ಹಾಗೂ ಅಬ್ದುಲ್ ಕರೀಮ್ ಕುದ್ದುಪದವು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಸ್ವಾಗತಿಸಿ, ಹಿಂದಿ ಭಾಷಾ ಉಪನ್ಯಾಸಕ ಸೋಮಶೇಖರ್ ಎಚ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕು| ಮೇಘಶ್ರೀ ಕಾರ್ಯಕ್ರಮ ನಿರೂಪಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ.ಆರ್. ವಂದಿಸಿದರು.
ಸಾಹಿತ್ಯ ಸಂಘ ಹಾಗೂ ವನಸಿರಿ ಇಕೋ ಕ್ಲಬ್ ಪದಾಧಿಕಾರಿಗಳು ಹಾಗೂ ಪ್ರಮೋಷನ್ ವಿಡಿಯೋ ತಯಾರಕರಾದ ಹಿರಿಯ ವಿದ್ಯಾರ್ಥಿ ಶ್ರೀಪಾದ ಮತ್ತು ಬಳಗದವರು ಹಾಜರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಆಟಿಯ ವಿಶೇಷ ತಿಂಡಿ- ತಿನಿಸು, ಖಾದ್ಯಗಳನ್ನು ಒಳಗೊಂಡ ಊಟವನ್ನು ಉಣಬಡಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


