ಶಿಕ್ಷಣ ಸಂಸ್ಥೆಗಳ ಶಿಸ್ತನ್ನು ವೃದ್ಧಿಸುವಲ್ಲಿ ಸ್ಕೌಟ್ಸ್ & ಗೈಡ್ಸ್ ಮಹತ್ವದ ಪಾತ್ರ: ಇನ್‌ಸ್ಪೈರ್ ಇಂಟರ್ ನ್ಯಾಷನಲ್ ಶಾಲೆಯ ಕಾರ್ಯದರ್ಶಿ ಅಶೋಕ
ಆಲೂರು: ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಬಿತ್ತುವುದರ ಜೊತೆಗೆ ಶಿಕ್ಷಣ ಸಂಸ್ಥೆಗಳ ಶಿಸ್ತನ್ನೂ ವೃದ್ಧಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮಗ್ಗೆ ಕಾರಗೋಡು ಇನ್‌ಸ್ಪೈರ್ ಇಂಟರ್ ನ್ಯಾಷನಲ್ ಶಾಲೆಯ ಕಾರ್ಯದರ್ಶಿ ಅಶೋಕ ಅಭಿಪ್ರಾಯಪಟ್ಟರು.
ಅವರು ಆಲೂರು ತಾಲ್ಲೂಕು ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಮಗ್ಗೆ ಕಾರಗೋಡು ಇನ್‌ಸ್ಪೈರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಆರಂಬಿಕ ತರಬೇತಿ ಶಿಬಿರ ಉದ್ಘಾಟನೆ ಮಾಡಿ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗಾಗಿಯೇ ಸ್ಥಾಪಿತವಾದ ಸಂಸ್ಥೆಯಾಗಿದೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬಿತ್ತುವುದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೌಟುಂಬಿಕ ಮೌಲ್ಯಗಳನ್ನು ವೃದ್ಧಿಸುತ್ತದೆ ಎಂದರು.
ಹಲವು ವರ್ಷಗಳಿಂದ ಆಲೂರು ತಾಲ್ಲೂಕಿನಲ್ಲಿ ಸ್ಕೌಟ್ಸ್ ಗೈಡ್ಸ್ ಸಂಸ್ಥೆ ತುಂಬಾ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಾ ಬರುತ್ತಿದೆ. ತಾಲ್ಲೂಕಿನಲ್ಲಿ ಗುಣಾತ್ಮಕ ಸಂಘಟನೆ ಮಾಡುತ್ತಿರುವ ಕಾರ್ಯದರ್ಶಿ ಕೊಟ್ರೇಶ್ ಎಸ್. ಉಪ್ಪಾರ್ ಆಸಕ್ತಿ, ಸಹಕಾರದಿಂದ ಕಡಿಮೆ ಕಾಲವಧಿಯಲ್ಲಿ ನಮ್ಮ ಶಾಲೆಯಲ್ಲಿಯೂ ಆರಂಭವಾಗುತ್ತಿರುವುದು ತುಂಬಾ ಖುಷಿತಂದಿದೆ. ನಮ್ಮ ಶಾಲೆಯ ಎಲ್ಲಾ ಮಕ್ಕಳಿಗೂ ಸ್ಕೌಟ್ಸ್ ಗೈಡ್ಸ್ ವಿಸ್ತರಿಸುವ ಮೂಲಕ ಮಕ್ಕಳನ್ನು ಆದರ್ಶ ಪ್ರಜೆಗಳನ್ನಾಗಿ ಮಾಡುವುದು ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಇಂದು ಹದಿನಾರು ಶಿಕ್ಷಕರಿಗೆ ಸ್ಕೌಟ್ಸ್, ಗೈಡ್ಸ್, ಕಬ್ಸ್, ಫ್ಲಾಕ್ ತರಬೇತಿ ನೀಡುತ್ತಿರುವುದು ನಮ್ಮ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉತ್ತಮ ಅವಕಾಶಗಳನ್ನು ಒದಗಿಸಲಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಸ್ಟೀಫನ್ ಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ. ಪ್ರಿಯಾಂಕ, ತಾಲ್ಲೂಕು ಕಾರ್ಯದರ್ಶಿ ಕೊಟ್ರೇಶ್ ಎಸ್. ಉಪ್ಪಾರ್ ಸೇರಿದಂತೆ ಶಾಲೆಯ ಶಿಕ್ಷಕರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ