ಅಂಬಿಕಾ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಪುಟಾಣಿ ರಾಧಾಕೃಷ್ಣರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.. 


ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಸಿದ ಕಿರೀಟ ತಯಾರಿ, ಭಗವದ್ಗೀತೆ ಕಂಠಪಾಠ, ರಸಪ್ರಶ್ನೆ ಮತ್ತು ಭಜನಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಎಲ್‍ಕೆಜಿಯಿಂದ ಎರಡನೇ ತರಗತಿಯವರೆಗಿನ ಪುಟಾಣಿ ರಾಧಾ ಕೃಷ್ಣರಿಗೆ ಆರತಿ ಬೆಳಗಲಾಯಿತು. ಐದನೇ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳು ಭಜನೆ ನಡೆಸಿಕೊಟ್ಟರು.  ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮಡಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಯಿತು. 


ಭಗವದ್ಗೀತೆಯ ನಾಲ್ಕನೇ ಅಧ್ಯಾಯವನ್ನು ಪಠಿಸಿ ಆರತಿ ಬೆಳಗುವುದರೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು. ಶಾಲೆಯ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್, ವಿದ್ಯಾರ್ಥಿಗಳ ಪೆÇೀಷಕರು ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಪೂಜಾ ಕಾರ್ಯಕ್ರಮ ನಿರ್ವಹಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top