ಅಡಿಕೆ ಕೊಳೆರೋಗ ವ್ಯಾಪಕ; ಹವಾಮಾನ ಆಧಾರಿತ ಬೆಳೆ ವಿಮೆ ತಕ್ಷಣವೇ ಬಿಡುಗಡೆಗೆ ಒತ್ತಾಯ

Upayuktha
0


ಪುತ್ತೂರು: ರಾಜ್ಯದಲ್ಲಿ ಈ ಬಾರಿ ಮಳೆಯ ಕಾರಣದಿಂದ ಅಡಿಕೆ ಬೆಳೆಗಾರರು ಕೊಳೆರೋಗದಿಂದ ಸಂಕಷ್ಟ ಒಳಗಾಗಿದ್ದಾರೆ. ಈಗಾಗಲೇ ಕಳೆದ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ವರ್ಷವೂ ಅಂತ್ಯವಾಗಿದ್ದು, ತಕ್ಷಣವೇ ಹವಾಮಾನ ಆಧಾರಿತ ಬೆಳೆ ವಿಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ. 


ಈ ವರ್ಷದ ಮಳೆಯ ಕಾರಣದಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿದೆ. ಅಡಿಕೆ ಬೆಳೆಗಾರರ ಸಂಘವು ನಡೆಸಿದ ಸರ್ವೆಯ ಪ್ರಕಾರ ಈ ಬಾರಿ ಕೃಷಿಕರಿಗೆ ಶೇ.50 ಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಿದೆ. ಬೆಳೆಗಾರರು ಈಗ ಸಂಕಷ್ಟದಲ್ಲಿದ್ದಾರೆ. ಶೇ.95 ರಷ್ಟು ಅಡಿಕೆ ಬೆಳೆಗಾರರು ಈ ಬಾರಿ ಕೊಳೆರೋಗದ ಸಂಕಷ್ಟ ಎದುರಿಸುತ್ತಿದ್ದಾರೆ. ಶೇ.85 ರಷ್ಟು ಕೃಷಿಕರಿಗೆ ಮಳೆಯ ಕಾರಣದಿಂದ ಕೊಳೆರೋಗ ತಡೆಗೆ ಬೋರ್ಡೋ ಸಿಂಪಡಣೆಗೆ ಸಾಧ್ಯವಾಗಿಲ್ಲ. ಈಗ ಕೊಳೆರೋಗ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಕೊಳೆರೋಗ ನಿಯಂತ್ರಣಕ್ಕೆ ಮೂರನೇ ಸುತ್ತಿನ ಔಷಧಿ ಸಿಂಪಡಣೆಗೂ ಪ್ರಯತ್ನ ನಡೆಯುತ್ತಿದೆ.


ಕಳೆದ ವರ್ಷವೂ ಹಲವು ಕಡೆ ಇಳುವರಿಯ ಕೊರತೆಯೂ ಇತ್ತು. ಇದೀಗ ವ್ಯಾಪಕವಾದ ಕೊಳೆರೋಗದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಈಗ ಕೊಳೆರೋಗ ನಿಯಂತ್ರಣಕ್ಕೆ ಔಷಧಿ ಸಿಂಪಡಣೆ ಮಾಡಲೇಬೇಕಾಗಿದೆ. ಈ ಹಂತದಲ್ಲಿ ಬೆಳೆಗಾರರಿಗೆ ಆರ್ಥಿಕ ನೆರವು ಕೂಡಾ ಅಗತ್ಯ ಇದೆ. ಹೀಗಾಗಿ, ಕಳೆದ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಿರುವ  ಬೆಳೆಗಾರರಿಗೆ ತಕ್ಷಣವೇ ಬೆಳೆ ವಿಮೆ ಪಾವತಿಗೆ ವ್ಯವಸ್ಥೆ ಮಾಡುವುದರ ಜೊತೆಗೆ ಬೆಳೆ ವಿಮೆ ಪಾವತಿಗೆ ಸಾಧ್ಯವಾಗದ ಅಡಿಕೆ ಬೆಳೆಗಾರರಿಗೆ ನಷ್ಟದ ಪರಿಹಾರ ಕ್ರಮವಾಗಿ ತಕ್ಷಣವೇ ಸರ್ಕಾರವು ಇಲಾಖೆಗಳ ಮೂಲಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘವು ಒತ್ತಾಯಿಸಿದೆ. 


ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ದಾಖಲೆಗಳನ್ನು ಪರಿಶೀಲಿಸಿ ವಿಮೆ ಬಿಡುಗಡೆಗೆ ತಕ್ಷಣದ ಕ್ರಮ ಆಗಬೇಕಾಗಿದೆ. ಈ ಹಂತಗಳನ್ನು ತಕ್ಷಣವೇ ಮಾಡಬೇಕಾಗಿದೆ. ಕಳೆದ ಒಂದೆರಡು ವರ್ಷಗಳಿಂದ ಅಕ್ಟೋಬರ್‌ ಅಂತ್ಯ ಅಥವಾ ನವೆಂಬರ್‌ ತಿಂಗಳಲ್ಲಿ ವಿಮೆ ಹಣ ಬಿಡುಗಡೆಯಾಗುತ್ತಿದೆ. ಇಲಾಖೆಗಳ ಬಳಿ ಹವಾಮಾನದ ಡಾಟಾಗಳು ಇರುವುದರಿಂದ ತಕ್ಷಣವೇ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳೆಗಾರರ ಸಂಘವು ಒತ್ತಾಯಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top