ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 2 ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಸಲಾಯಿತು. ಈ ಈ ಕಾರ್ಯಕ್ರಮವನ್ನು ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ರವೀಶ್ ಪಡುಮಲೆ ದೀಪ ಬೆಳಗಿಸಿ ಚೆನ್ನ ಮನೆ ಆಟವನ್ನು ಆಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತುಳುನಾಡಿನ ಆಚಾರ ವಿಚಾರ ಪದ್ಧತಿ ಹಾಗೂ ನಮ್ಮ ಹಿರಿಯರ ಜೀವನ ಶೈಲಿ ಜೊತೆಗೆ ನಡೆದು ಬಂದಂತಹ ವಿಚಾರವನ್ನು ಮಕ್ಕಳಿಗೆ ತಿಳಿ ಹೇಳಿದರು.
ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್, ಉಪಾಧ್ಯಕ್ಷೆ ಶ್ರೀಮತಿ ಪ್ರತಿಮ ಹಾಗೂ ಕೃಷ್ಣ ಪ್ರಸಾದ್ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ಸದಸ್ಯ ಶ್ರೀಮತಿ ಶೀಲಾ ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ಅವರು ಸಭಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರ ರಕ್ಷಕ ಸಂಘದ ಸದಸ್ಯರು ಉಪಸಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಜ್ಯೋತಿ ಸ್ವಾಗತಿಸಿದರು. ಶ್ರೀಮತಿ ಸಮತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ