ಉಡುಪಿ: ಆಗಸ್ಟ್ 2, ಶನಿವಾರ ಸಂಜೆ ಗಂಟೆ 4.30ಕ್ಕೆ ಉಡುಪಿ ಶ್ರೀ ಕೃಷ್ಣಾಪುರ ಮಠದ 'ಶ್ರೀಕೃಷ್ಣ ಸಭಾ ಭವನ'ದಲ್ಲಿ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.
ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಭಕ್ತರಾದ ತಾವು ಪರ್ಯಾಯ ಮಹೋತ್ಸವದ ಅಂಗವಾಗಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಶ್ರೀ ಶೀರೂರು ಮಠದ ಪರವಾಗಿ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ