ಆ. 29: ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣ ಜಾಥಾ: ಎಲ್ಲಾ ಜೈನಮಠಗಳ ಭಟ್ಟಾರಕರುಗಳಿಂದ ಮಾರ್ಗದರ್ಶನ

Upayuktha
0


ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆ. 29 ರಂದು ಶುಕ್ರವಾರ ಪೂರ್ವಾಹ್ನ ಹನ್ನೊಂದು ಗಂಟೆಯಿಂದ ಧರ್ಮಸಂರಕ್ಷಣಾ ಜಾಥಾ ನಡೆಯಲಿದ್ದು ರಾಜ್ಯದ ಎಲ್ಲಾ ಜೈನಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.


ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕರ ಸ್ವಾಮೀಜಿ, ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ವರೂರು ಜೈನಮಠದ ಧರ್ಮಸೇನ ಭಟ್ಟಾರಕ ಸ್ವಾಮೀಜಿ, ಜಿನಕಂಚಿಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ, ಸೋಂದಾ ಸ್ವಾದಿ ಜೈನಮಠದ ಭಟ್ಟಾಕಲಂಕ ಸ್ವಾಮೀಜಿ, ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಲಕ್ಷಿö್ಮÃಸೇನ ಭಟ್ಟಾರಕ ಸ್ವಾಮೀಜಿ, ಮಂಡ್ಯದ ಆರತಿಪುರ ಜೈನಮಠದ ಸಿದ್ಧಾಂತಕೀರ್ತಿ ಭಟ್ಟಾರಕ ಸ್ವಾಮೀಜಿ, ಲಕ್ಕವಳ್ಳಿ ಜೈನಮಠದ ವೃಷಭಸೇನ ಭಟ್ಟಾರಕ ಸ್ವಾಮೀಜಿ ಮತ್ತು ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.


ಆ. 29 ರಂದು ಶುಕ್ರವಾರ ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶ ದ್ವಾರದ ಬಳಿ ಪೂಜ್ಯ ಭಟ್ಟಾರಕರುಗಳನ್ನು ಭಕ್ತಿಪೂರ್ವಕ ಸ್ವಾಗತಿಸಿ ಬಳಿಕ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಭಟ್ಟಾರಕರುಗಳಿಂದ ಮಂಗಲ ಪ್ರವಚನ ಕಾರ್ಯಕ್ರಮವಿದೆ. ಸುಮಾರು ಹತ್ತು ಸಾವಿರ ಮಂದಿ ಶ್ರಾವಕರು, ಶ್ರಾವಿಕೆಯರು ಸಮಾರಂಭದಲ್ಲಿ ಭಾಗವಹಿಸುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top