ಆ.6: ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 'ಸುವರ್ಣ ಸಂಭ್ರಮ'

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಆ.6ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.


ಬೆ.9ಕ್ಕೆ ಉದ್ಘಾಟನಾ ಕಾರ್ಯಕ್ರಮ ಶಾಸಕ ವೇದವ್ಯಾಸ ಕಾಮತ್ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಪ್ರತಿಷ್ಠಿತ ಸುವರ್ಣ ಸಂಭ್ರಮ ಗೌರವ ಪ್ರಶಸ್ತಿಯನ್ನು ಮೂಡುಬಿದಿರೆಯ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರಿಗೆ ಪ್ರದಾನ ಮಾಡಲಾಗುವುದು ಸುವರ್ಣ ಸಂಭ್ರಮ ಸ್ಮರಣ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಬಿಡುಗಡೆ ಗೊಳಿಸಲಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸುವರ್ಣ ಸಂಭ್ರಮ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ.‌ ಸುವರ್ಣ ಸಂಭ್ರಮ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ. ಎಲ್. ಧರ್ಮ ನೆರವೇರಿಸಲಿದ್ದಾರೆ.


ಮಧ್ಯಾಹ್ನ ಪ್ರಸ್ತುತ ಹಾಗೂ ಭವಿಷ್ಯದ ಮಾಧ್ಯಮ ವಿಚಾರ ಗೋಷ್ಟಿ ರವಿ ಹೆಗಡೆ, (ಪ್ರಧಾನ ಸಂಪಾದಕರು, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್) ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿಜಯ ಕರ್ನಾಟಕ ಮಂಗಳೂರು ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಮತ್ತು ದಾಯ್ಜಿ ವರ್ಲ್ಡ್ ಪ್ರೈ.ಲಿಮಿಟೆಡ್ ನ ವ್ಯವಸ್ಥಾಪಕ ಸಂಪಾದಕ ವಾಲ್ಟರ್ ನಂದಳಿಕೆ ವಿಷಯ ಮಂಡನೆ ಮಾಡಲಿದ್ದಾರೆ.


ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ಹಾಗೂ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸನ್ಮಾನಿಸುವರು. ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿನ ಮಂಗಳೂರು ಪ್ರೆಸ್ ಕ್ಲಬ್  ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿಯ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್. ಬಿ.ಎನ್, ರಾಜ್ಯ ಕಾರ್ಯಕಾರಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top