ತಲಪಾಡಿ: ಬಸ್- ರಿಕ್ಷಾ ನಡುವೆ ಭೀಕರ ಅಪಘಾತ, ಮಗು ಸೇರಿದಂತೆ ಐವರು ಸಾವು

Chandrashekhara Kulamarva
0



 

ತಲಪಾಡಿ: ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ಬಳಿ ಬಸ್‌ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ವರದಿಯಾಗಿದೆ.

ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ ಐವರು ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ.


ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top