ಬಳ್ಳಾರಿ: “ಜನಸುರಕ್ಷಾ ಯೋಜನೆ” ವಿಶೇಷ ಕಾರ್ಯಕ್ರಮ

Chandrashekhara Kulamarva
0


ಬಳ್ಳಾರಿ: ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ ಬಿ. ಬೆಳಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದಲ್ಲಿ, ಕೆನರಾ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಭಾರತ ಸರ್ಕಾರದ ಹೆಮ್ಮೆಯ ಕನಸಾದ “ಜನಸುರಕ್ಷಾ ಯೋಜನೆ” ಕುರಿತಾದ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತು.


ಕೆನರಾ ಬ್ಯಾಂಕ್ ಬಳ್ಳಾರಿ ಪ್ರಾದೇಶಿಕ ವ್ಯವಸ್ಥಾಪಕ ಅರುಣಕುಮಾರ ಸ್ವಾಗತಿಸಿದರು.


ಲೀಡ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ  ಗಿರೀಶ್ ವಿ. ಕುಲಕರ್ಣಿ ಪ್ರಾಸ್ತಾವಿಕ ಭಾಷಣ ಮಾಡಿ, ಬ್ಯಾಂಕಿನ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್ ಅವರು ಜೀವನ್ ಸುರಕ್ಷಾ ಹಾಗೂ ಜೀವನ್ ಜ್ಯೋತಿ ಯೋಜನೆಗಳ ಅನುಕೂಲಗಳ ಬಗ್ಗೆ ವಿವರಿಸಿದರು.. 


ಪಿಎಮ್ಎಫ್ಎಂಇ  ಯೋಜನೆ ಅಡಿಯಲ್ಲಿ ಗ್ರಾಮೀಣ ಮಟ್ಟದಲ್ಲಿ ಆಹಾರ ಸಂಸ್ಕರಣಾ ಘಟಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸಿದರು.


ಕೆನರಾ ಬ್ಯಾಂಕ್ ಬೆಂಗಳೂರು ಸಿಜಿಎಂ ರಾಕೇಶ್ ಕಶ್ಯಪ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಈ ಯೋಜನೆಯ ಸೌಲಭ್ಯವನ್ನು ಹೆಚ್ಚಿನ ಮಟ್ಟದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಕರೆ ನೀಡಿದರು.


ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಅಧ್ಯಕ್ಷ  ಶ್ರೀಕಾಂತ್ ಎಂ. ಬಂಡಿವಾಡ ಅವರು ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಹಳ್ಳಿ–ಪಟ್ಟಣದಲ್ಲಿಯೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಜನಸುರಕ್ಷಾ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಸಿಬ್ಬಂದಿ ಹಾಗೂ ಸೇವಾ ಪ್ರತಿನಿಧಿಗಳ ಮೂಲಕ ಮನೆಮನೆಗೆ ತಲುಪಿಸಿ, ಅಭಿಯಾನ ರೂಪದಲ್ಲಿ ಹೆಚ್ಚಿನ ಖಾತೆಗಳನ್ನು ತೆರೆಯುತ್ತಿದೆ ಎಂದು ತಿಳಿಸಿದರು. ಇನ್ನೂ ಯಾರಾದರೂ ಖಾತೆ ತೆರೆಯದೆ ಇದ್ದರೆ ಹತ್ತಿರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಲು ಅವರು ಸಾರ್ವಜನಿಕರಿಗೆ ಕರೆ ನೀಡಿದರು.ಇದೇ ಸಂದರ್ಭದಲ್ಲಿ ರೀ-ಕೆವೈಸಿ (ಗ್ರಾಹಕ ಪರಿಚಯ ನವೀಕರಣ )ಕುರಿತು ಜನರಿಗೆ ಸವಿಸ್ತಾರವಾದ ಮಾಹಿತಿ ನೀಡಲಾಯಿತು.


ವೀರೇಂದ್ರ ಬಾಬು ಅವರು ಜನಸುರಕ್ಷಾ ಯೋಜನೆಯಿಂದಾಗುವ ಅನುಕೂಲಗಳು ಹಾಗೂ ಭವಿಷ್ಯದಲ್ಲಿ ಕುಟುಂಬದವರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. 


ಕಾರ್ಯಕ್ರಮದ ಕೊನೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಪ್ರಬಂಧಕ  ಗಿರೆಡ್ಡಿ ಅವರು ಜನಸುರಕ್ಷಾ ಯೋಜನೆ ಕುರಿತು ಗ್ರಾಮೀಣ ಜನತೆಗೆ ಅರಿವು ಮೂಡಿಸಿದ ಎಲ್ಲಾ ಗಣ್ಯರಿಗೆ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top