ಧರ್ಮಸ್ಥಳದಲ್ಲಿ ಪಾದಯಾತ್ರೆ

Chandrashekhara Kulamarva
0

ಸೋಮವಾರ ಬೆಂಗಳೂರಿನ ಭಕ್ತರು ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಿಂದ ಕಾಲ್ನಡಿಗೆಯಲ್ಲಿ ದೇವಸ್ಥಾನಕ್ಕೆ ಬಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ  ಮಾಧ್ಯಮಗಳಲ್ಲಿ  ಪ್ರಕಟವಾದ ಸುಳ್ಳುವದಂತಿ ಹಾಗೂ ಅಪಪ್ರಚಾರವನ್ನು ಖಂಡಿಸಿ ಬೆಂಗಳೂರಿನ ಪಾದಯಾತ್ರಿಗಳ ಸಂಘದ ಸ್ಥಾಪಕಾಧ್ಯಕ್ಷ ಹನುಮಂತಪ್ಪ ಗುರೂಜಿ ನೇತೃತ್ವದಲ್ಲಿ ಒಂದು ಸಾವಿರ ಮಂದಿ ಭಕ್ತಾದಿಗಳು ಸೋಮವಾರ ನೇತ್ರಾವತಿ ಸ್ನಾನಘಟ್ಟದಿಂದ ದೇವಸ್ಥಾನದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆಯಲ್ಲಿ ಬಂದು ದೇವರ ದರ್ಶನ ಮಾಡಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ. ಧರ್ಮಸ್ಥಳ ಎಂದಿನಂತೆ ಲಕ್ಷಾಂತರ ಭಕ್ತಾದಿಗಳ ಅತಿಶಯ ಕ್ಷೇತ್ರವಾಗಿ ಬೆಳೆಯಲಿ, ಬೆಳಗಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.


ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top