ಉಜಿರೆ: ಕರ್ನಾಟಕದಲ್ಲಿರುವ ಎಲ್ಲಾ ಜೈನಮಠಗಳ ಭಟ್ಟಾರಕರುಗಳು ಆ. 29 ರಂದು ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶುಭಾಶೀರ್ವಾದ ಮಾಡಿ ಹರಸಲಿದ್ದಾರೆ ಎಂದು ಅಖಿಲ ಭಾರತ ಭಟ್ಟಾರಕ ಜೈನಮಠ ಪರಿಷದ್‌ನ ಅಧ್ಯಕ್ಷರಾದ ಕನಕಗಿರಿ ಜೈನಮಠದ ಪೂಜ್ಯ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕಾರ್ಯದರ್ಶಿಗಳಾದ ಅರಿಹಂತಗಿರಿ ಜೈನಮಠದ ಪೂಜ್ಯ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳದ ಬಗ್ಗೆ ಸಮೂಹ ಮಾಧ್ಯಮಗಳಲ್ಲಿ ಆಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿ ಯನ್ನು ಖಂಡಿಸಿ, ಸಮಸ್ತ ಜೈನಸಮಾಜದ ವತಿಯಿಂದ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಂಪೂರ್ಣ ರಕ್ಷಣೆಯ ಭರವಸೆ ನೀಡುವುದೇ ಈ ಭೇಟಿಯ ಉದ್ದೇಶವಾಗಿದೆ.
ಜೈನ್ ಮಿಲನ್ ಸೇರಿದಂತೆ ಜೈನಸಮಾಜದ ಮುಖಂಡರತುಗಳು, ಸೇವಾಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಾ ಅಂದು ಧರ್ಮಸ್ಥಳಕ್ಕೆ ಬಂದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಉಭಯ ಮಠಗಳ ಭಟ್ಟಾರಕರುಗಳು ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ