ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವ ಉದ್ಘಾಟನೆ

Upayuktha
0

ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ, ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ: ಕ್ಯಾಪ್ಟನ್ ಬ್ರಿಜೇಶ್ ಚೌಟ





ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.


ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮಂಗಳೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 


ಲೆ.ಕ. ರಮಾನಾಥ ಶೆಟ್ಟಿ ಮತ್ತು ಕ್ಷಮಾ ರಮಾನಾಥ ಶೆಟ್ಟಿ ಧ್ವಜಾರೋಹಣಗೈದರು. ಡಾ ಮಹಾಬಲ ರೈ ಮತ್ತು ಮಲ್ಲಿಕಾ ಎಂ ರೈ ತೆನೆ ವಿತರಿಸಿದರು. 

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.


ಸಮಾರಂಭದಲ್ಲಿ ಪುತ್ತೂರು ಬಂಟರ ಸಂಘದ ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟ್ವಾಳ ತಾಲೂಕು ಬಂಟರ ಸಂಘದ ಸಂಚಾಲಕ ಎ ರಾಮಣ್ಣ ರೈ, ಬಜಪೆ ಬಂಟರ ಸಂಘದ ಅಧ್ಯಕ್ಷ ಬಾಬು ಶೆಟ್ಟಿ, ಜಪ್ಪಿನಮೊಗರು ಬಂಟರ ಸಂಘದ ಅಧ್ಯಕ್ಷ ಜೆ ಸತ್ಯಪ್ರಸಾದ್ ಶೆಟ್ಟಿ, ಕುಳವಾರು-ಕೆಲೆಂಜಾರು ಬಂಟರ ಸಂಘದ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


ಅಜಿತ್ ಕುಮಾರ್ ಮಾಲಾಡಿ ಸ್ವಾಗತಿಸಿದರು. ಸಂಚಾಲಕ ಅಶ್ವತ್ಥಾಮ ಹೆಗ್ಡೆ ಅಲ್ತಾರು ವಂದಿಸಿದರು. ಭಾಗ್ಯರಾಜ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top