ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ.
ಅಪಘಾತ ವಲಯ ಎಂದೇ ಗುರುತಿಸಿಕೊಂಡಿರುವ ಪೆರ್ನಾಜೆಯ ಕಂಟ್ರಮಜಲು ತಿರುವಿನಲ್ಲಿ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ತೈಲ ಚೆಲ್ಲಿದ್ದು, ಇದರ ಮೇಲೆ ಕಾರು ಹರಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಎದುರಿನಿಂದ ಬಂದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ