ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ದೇವ್ ರೆವ್ ಕಂಪೆನಿಯ ನೇತೃತ್ವದ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್‌ನಲ್ಲಿ ಉನ್ನತ ಗೌರವಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಈ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ವಿಜೇತ ತಂಡ: ಭವ್ಯಾ ನಾಯಕ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್), ಚೈತ್ರಾ ಎಸ್ ನಾಯಕ್ (ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್) ಮತ್ತು ರಶ್ಮಿ ಎನ್ (ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್).
ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಅಮೂಲ್ಯ ಜಿ.ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಎರಡನೇ ರನ್ನರ್ ಅಪ್ ತಂಡ: ದೀತ್ಯ ಎಸ್ ಸಾಲಿಯಾನ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್), ಶ್ರಾವ್ಯ ಎ ಪ್ರಭು (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್).
ವಿಜೇತರಿಗೆ ರೂ.60,000/-, ಪ್ರಥಮ ರನ್ನರ್ ಅಪ್ ಗೆ ರೂ.30,000/-, ಮತ್ತು ಎರಡನೇ ರನ್ನರ್ ಅಪ್ ಗೆ ರೂ.15,000/- ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು.
ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಬೋಧಕರು ಮತ್ತು ವಿದ್ಯಾರ್ಥಿಗಳು ವಿಜೇತರನ್ನು ಅವರ ಗಮನಾರ್ಹ ಸಾಧನೆಗಾಗಿ ಅಭಿನಂದಿಸಿರುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


