ಮಂಡ್ಯ ಮತ್ತು ಮೈಸೂರಿನ ಭಕ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಉಜಿರೆ: ಮಾಜಿ ಸಚಿವರುಗಳಾದ ಸಾ.ರಾ. ಮಹೇಶ್ ಮತ್ತು ಕೆ.ಎಸ್. ಪುಟ್ಟರಾಜು ನೇತೃತ್ವದಲ್ಲಿ ಮಂಡ್ಯ ಹಾಗೂ ಮೈಸೂರಿನಿಂದ ಒಂದೂವರೆ ಸಾವಿರ ಭಕ್ತರು ಮತ್ತು ಅಭಿಮಾನಿಗಳು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೇಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಧರ್ಮಸ್ಥಳದ ಘನತೆ, ಗೌರವ ಕಾಪಾಡಲು ತಾವೆಲ್ಲರೂ ಸದಾ ಬದ್ಧರಾಗಿದ್ದೇವೆ ಎಂದು ಅವರು ಭರವಸೆ ನೀಡಿದರು.
ಅವರು ದೇವರ ದರ್ಶನ ಮಾಡಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. “ಅನ್ನಪೂರ್ಣ” ಭೋಜನಾಲಯದಲ್ಲಿ ಪ್ರಸಾದ ಸ್ವೀಕರಿಸಿದ ಬಳಿಕ ತಮ್ಮ ಊರಿಗೆ ಮರಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
