ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರ ಪ್ರಯುಕ್ತ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಇದರ ವತಿಯಿಂದ ಸಾರ್ವಜನಿಕರಿಗೆ ತೆಂಗು ಮತ್ತು ಔಷಧೀಯ ಸಸ್ಯಗಳ ವಿತರಣಾ ಕಾರ್ಯಕ್ರಮವನ್ನು ಶ್ರೀಪಾದರು ಗಿಡ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಅವರು ಆಶೀರ್ವಚನ ನೀಡಿ ಈ ರೀತಿಯ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕವಾಗಿದ್ದು ಪ್ರಕೃತಿಯನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಈ ಕಾರ್ಯವನ್ನು ಸಂಯೋಜನೆ ಮಾಡಿದ ಸಂಸ್ಥೆಗಳಿಗೆ ಅಭಿನಂದನೆಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಎ.ಎಫ್.ಐ ಪದಾಧಿಕಾರಿಗಳಾದ ಡಾ. ಸತೀಶ್ ರಾವ್ ಡಾ. ಸಂದೀಪ್ ಸನಿಲ್, ಸುಂದರ್ ಪೂಜಾರಿ ಮೂಡುಕುಕ್ಕುಡೆ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


