ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ವಿವಿಧ ಸ್ಪರ್ಧೆಗಳು

Upayuktha
0




ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನವನ್ನು ಅಕ್ಟೋಬರ್ 10 ರಂದು ವೈಶಿಷ್ಟ ಪೂರ್ಣ ಕಾರ್ಯಕ್ರಮಗಳ ಮೂಲಕ ನಡೆಸಲು ಟ್ರಸ್ಟಿನ ಸರ್ವಸದಸ್ಯರ ಸಭೆಯಲ್ಲಿ ನಿರ್ಧರಿಸಲಾಗಿದೆ.


ಅದರ ಅಂಗವಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗುವುದು.


ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಬಂಧವು ಫುಲ್ ಸ್ಕೇಪ್ ಹಾಳೆಯ ಎರಡು ಸಾವಿರ ಶಬ್ದಗಳನ್ನು ಮೀರಬಾರದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು. 


ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಟ್ರಸ್ಟ್, ಸಹಾಯಕ ನಿರ್ದೇಶಕರ ಕಛೇರಿ ಆವರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವರಾಮ ಕಾರಂತ ಕಲಾಗ್ರಾಮ ಪ್ರಗತಿನಗರ, ಅಲೆವೂರು ಉಡುಪಿ- 576104 ಇವರಿಗೆ ಸೆಪ್ಟಂಬರ್ 15 ರೊಳಗೆ ಕಳುಹಿಸಲು ಕೋರಲಾಗಿದೆ. ಅಂತಹ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ:9964583433 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top