ಕೃಷಿಕ ಪ್ರಕಾಶ್ ಮಂಚಾಲೆ ದಿಲ್ಲಿಯಲ್ಲಿ ಸ್ವಾತಂತ್ರ್ಯೋತ್ಸವ ಅತಿಥಿ

Upayuktha
0


ತ್ಯಾಗರ್ತಿ: ಸಮೀಪದ ಮಂಚಾಲೆ ಗ್ರಾಮದ ಪ್ರಗತಿಪರ ಕೃಷಿಕ ಹಾಗೂ ಕೇಂದ್ರ ಸರ್ಕಾರದ ಕೃಷಿ ಪ್ರಶಸ್ತಿ ಪುರಸ್ಕೃತರಾದ ಪ್ರಕಾಶ್ ಮಂಚಾಲೆ ಅವರಿಗೆ ಭಾರತೀಯ ಆಯುಷ್ ಇಲಾಖೆಯಿಂದ ನವದೆಹಲಿ ಕೆಂಪುಕೋಟೆಯಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಆಹ್ವಾನ ಬಂದಿದ್ದು ಪ್ರಕಾಶ್ ಮಂಚಾಲೆ ಮತ್ತು ಅವರ ಪತ್ನಿ ಶಾಂತಾ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದಾರೆ.


ತಮ್ಮ ಸಣ್ಣ ಹಿಡುವಳಿ ಜಮೀನಿನಲ್ಲಿ ತರಹೇವಾರಿ ಔಷಧಿ ಸಸ್ಯಗಳನ್ನು ಬೆಳೆಸಿ ವಿಷೇಶ ಸಾಧನೆ ಮಾಡಿದ ಅವರು ಎರಡು ವರ್ಷಗಳ ಹಿಂದೆ ಕೇಂದ್ರ ಸರ್ಕಾರದ ಜಿನೋಮ್ ಸೇವಿಯರ್ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳನ್ನು ಪಡೆದಿದ್ದಾರೆ. ಪ್ರಕಾಶ್ ಮಂಚಾಲೆಯವರಿಗೆ ಸಾಗರ, ವಿಜಯನಗರದ ಬರಹಗಾರ್ತಿ ಎಸ್. ರೋಹಿಣಿ ಶರ್ಮಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top