ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ: ಮುಳಿಯ ಗೋಪಾಲಕೃಷ್ಣ ಭಟ್

Upayuktha
0


ಮಂಗಳೂರು: ತಪ್ಪು , ಯಾರು ಮಾಡಿದರೂ ತಪ್ಪೇ ;  ಸಹಾಯ,  ಯಾರು ಮಾಡಿದರೂ ಸಹಾಯವೇ ಎಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ನುಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾ| ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. 


ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು ಕೃತಿಗಳನ್ನು (ಸ್ವಂತ, ಅನುವಾದಿತ) ಬರೆಯಲು ಸಾಧ್ಯವಾಗಿದೆ. ಇದರಲ್ಲಿ  ತಮ್ಮ ರಾಘವಯ್ಯನ ಮತ್ತು ಮಡದಿ ಕಾವೇರಿಯ ಪಾತ್ರ ಬಹಳ ದೊಡ್ಡದು. ನನ್ನ ಬರವಣಿಗೆಯನ್ನು ಓದಿ, ತಪ್ಪಿದ್ದರೆ ತಿಳಿಸುವುದನ್ನು ಮತ್ತು ಮುದ್ರಣದ ಅಂತಿಮ ಹಂತದವರೆಗೂ ಸಹಾಯ ಮಾಡುವುದನ್ನು  ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಲೇಬೇಕು ಎನ್ನುತ್ತಾ  ಅವರು ಈ ರೀತಿ ಅಭಿಪ್ರಾಯಪಟ್ಟರು.


ಘಟಕದ ಅಧ್ಯಕ್ಷ ಡಾ | ಮಂಜುನಾಥ ರೇವಣ್ಕರ್ ಲೇಖಕರನ್ನು ಸಂಮಾನಿಸಿ, ಇಂದು ಇಂತಹ ಸಜ್ಜನ ಬಂಧು, ಸಾಹಿತಿ, ಪಂಡಿತ ವಿದ್ವಾಂಸ ಮುಳಿಯ ತಿಮ್ಮಪ್ಪಯ್ಯನವರ ಸುಪುತ್ರರ ಮನೆಗೆ ಬಂದಿರುವುದು ನಮ್ಮ ಭಾಗ್ಯ ಎನ್ನುತ್ತಾ,  ನೂರು ವರ್ಷ ಪೂರೈಸಿ ನೂರು ಕೃತಿಗಳೂ ಬರಲಿ ಎಂದು ಹಾರೈಸಿದರು.


ಹೆಸರಾಂತ ವೈದ್ಯ ಸಾಹಿತಿ ಡಾ. ಮುರಲೀ ಮೋಹನ್ ಚೂಂತಾರು ಅಭಿನಂದನಾ ಮಾತುಗಳನ್ನಾಡಿ, ಇಂತಹ ಸಾಹಿತಿಗಳ ಕೃತಿಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದರಲ್ಲದೆ, ಲೇಖಕರ  ಸಂಗ್ರಹದಲ್ಲಿರುವ ಹಳೆಯ ಮಹತ್ವದ ಗ್ರಂಥಗಳನ್ನು ಮರು  ಪ್ರಕಟಿಸುವುದರಿಂದ ಸಾಹಿತ್ಯ ಲೋಕಕ್ಕೆ ಅಪಾರ ಲಾಭವಿದೆ ಎಂದರು.

 

ಗೋಪಾಲಕೃಷ್ಣ ಭಟ್ ಅವರ ಪತ್ನಿ ಕಾವೇರಿ ಅಮ್ಮ, ತಮ್ಮ ನಿವೃತ್ತ ವಿಜ್ಞಾನಿ  ಮುಳಿಯ ರಾಘವಯ್ಯ, ಪುತ್ರಿಯರಾದ ದೇವಕಿ, ಡಾ | ಮಧುಮತಿ, ಅಳಿಯ ಭವಾನಿ ಶಂಕರ್, ಮೊಮ್ಮಗು ಪುಟಾಣಿ ಪ್ರಾಚಿ ಜೊತೆಗಿದ್ದರು.


ಕ ಸಾ ಪ ದ.ಕ. ಜಿಲ್ಲಾ ಸಮಿತಿಯ ಸನತ್ ಕುಮಾರ್ ಜೈನ್, ಘಟಕದ ಡಾ| ಮೀನಾಕ್ಷಿ ರಾಮಚಂದ್ರ ಉಪಸ್ಥಿತರಿದ್ದರು.


ರತ್ನಾವತಿ ಜೆ. ಬೈಕಾಡಿ ಪ್ರಾರ್ಥಿಸಿದರು. ಗೌ. ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ವಂದಿಸಿದರು. ಕೋಶಾಧಿಕಾರಿ ಎನ್. ಸುಬ್ರಾಯ ಭಟ್  ನಿರೂಪಿಸಿದರು. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top