ಉಜಿರೆ: ಕಾಲೇಜು ಜೀವನದಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ವಿದ್ಯಾರ್ಥಿಗಳು ಗಮನಹರಿಸಿ ಸೂಕ್ತ ತಯಾರಿಯಲ್ಲಿ ತೊಡಗಬೇಕು ಎಂದು ಮನಃಶಾಸ್ತ್ರಜ್ಞೆ, ಬೆಂಗಳೂರಿನ ಭಾರತೀಯ ಮನಃಶಾಸ್ತ್ರ ಮತ್ತು ಸಂಶೋಧನಾ ಸಂಸ್ಥೆಯ ನಿಕಟಪೂರ್ವ ಪ್ರಾಧ್ಯಾಪಕಿ ಜಯಶ್ರೀ ಹೇಳಿದರು.
ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದ ವತಿಯಿಂದ ನಡೆದ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪುಸ್ತಕದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಿಂದ ಆಗಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದನ್ನು ಕಲಿಕೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿನಿಯೋಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪದ್ಮಶ್ರೀ ಸ್ವಾಗತಿಸಿ, ಯಶಸ್ವಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


