ಶಿವಮೊಗ್ಗ: ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಇಂಗ್ಲೀಷ್ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಎಸ್ ಜಿ ರವರು ಕುಪ್ಪಂ ನ ದ್ರಾವಿಡಿಯನ್ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಆ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.
ಅವರು ಹರಿಹರ ದ Dr ಬಿ ವೈ ಪಾಟೀಲ್ ಅವರ ಮಾರ್ಗದರ್ಶನದಲ್ಲಿ "ಬೂಕರ್ ಪುರಸ್ಕೃತ ಭಾರತೀಯ ಇಂಗ್ಲಿಷ್ ಕಾದಂಬರಿಗಳಲ್ಲಿ ಭಾರತದ ಚಿತ್ರಣ" ಎಂಬ ಮಹಾ ಪ್ರಬಂಧ ವನ್ನು ಮಂಡಿಸಿರುತ್ತಾರೆ. ಡಾ ಗಣೇಶ್ ಪ್ರಸಾದ್ ರವರಿಗೆ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾಕ್ಟರ್ ರಜನಿ ಪೈ, ಡಾಕ್ಟರ್ ಪ್ರೀತಿ ಶಾನಭಾಗ್, ಡಾಕ್ಟರ್ ವಾಮನ್ ಶಾನ್ ಭಾಗ್ ತಮ್ಮ ಅಭಿನಂದನೆಗಳನ್ನು ಹೇಳಿದ್ದಾರೆ. ಅದರಂತೆ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ ರಾಜೇಂದ್ರ ಚೆನ್ನಿ, ಆಡಳಿತಾಧಿಕಾರಿ ಪ್ರೊ ರಾಮಚಂದ್ರ ಬಾಳಿಗಾ ಗಣೇಶ ಪ್ರಸಾದ್ ಅವರನ್ನು ಅಭಿನಂದಿಸಿದ್ದಾರೆ.
ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಡಾ ಸಂಧ್ಯಾ ಕಾವೇರಿ, ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇಷ್ಮಾ, ಸಿಬ್ಬಂದಿ ಮಿತ್ರರು, ವಿದ್ಯಾರ್ಥಿಗಳು ಶುಭಾಶಯ ಕೋರಿದರು
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


