ಸುರತ್ಕಲ್: ಅನೇಕ ಭಾಷೆಗಳು ಆಧುನಿಕತೆಯತ್ತ ಬದಲಾವಣೆ ಹೊಂದಿದರೂ ದೇವಭಾಷೆ ಎಂದೇ ಕರೆಯಲ್ಪಡುವ, ಭಾರತದಎಲ್ಲಾ ಭಾಷೆಗಳಿಗೆ ಮೂಲವಾದ ಸಂಸ್ಕೃತ ಭಾಷೆಯು ತನ್ನ ಸ್ಥಿರತೆಯನ್ನು ಕಾಪಾಡಿಕೊಂಡಿದೆ. ಎಂದು ಎಸ್.ಎಂ.ಎಸ್.ಪಿ. ಸಂಸ್ಕೃತ ಮಹಾವಿದ್ಯಾಲಯ ಉಡುಪಿಯ ಪ್ರಾಧ್ಯಾಪಕ ಡಾ.ಅಮೃತೇಶಆಚಾರ್ಯ ಅಭಿಪ್ರಾಯಪಟ್ಟರು.
ಅವರು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘ (ರಿ.)ಇಲ್ಲಿನ ಆಡಳಿತಕ್ಕೊಳಪಟ್ಟ ಗೋವಿಂದದಾಸಕಾಲೇಜು, ಸುರತ್ಕಲ್‍ನ ಸಂಸ್ಕೃತ ವಿಭಾಗವು ಆಯೋಜಿಸಿದ್ದ ಸಂಸ್ಕೃತೋತ್ಸವ– 2025ರ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ ಪ್ರಾಚೀನ ಭಾರತದಇತಿಹಾಸ, ತತ್ವಶಾಸ್ತ್ರ, ಗಣಿತಶಾಸ್ತ್ರಗಳು ಸಂಸ್ಕೃತ ಭಾಷೆಯಲ್ಲಿ ರಚನೆಗೊಂಡಿದ್ದು ಇವುಗಳನ್ನು ಅಧ್ಯಯನ ನಡೆಸಲು ಸಂಸ್ಕೃತ ಭಾಷಾಧ್ಯಯನ ಅಗತ್ಯವಾಗಿದೆಎಂದರು.
ಅತಿಥಿಯಾಗಿದ್ದಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಭಟ್‍ಎಸ್.ಜಿ. ಮಾತನಾಡಿ ಸಂಸ್ಕೃತ ಭಾಷೆಯನ್ನುಅಧ್ಯಯನ ಮಾಡುವುದರಿಂದ ಆಧ್ಯಾತ್ಮಕ ವಿಷಯಗಳ ಬಗ್ಗೆ ಜ್ಞಾನ ಸಂಪಾದನೆಯಾಗಿ ಏಕಾಗ್ರತೆ, ಆತ್ಮವಿಶ್ವಾಸಗಳು ಹೆಚ್ಚಾಗುತ್ತದೆ ಎಂದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ನಟರಾಜಜೋಷಿ ಕಾರ್ಯಕ್ರಮ ಸಂಯೋಜಿಸಿದರು. ಸಂಸ್ಕೃತ ಉಪನ್ಯಾಸಕ ಸಂದೀಪ್ ಆಚಾರ್ಯ ವಂದಿಸಿದರು. ಅನಿರುದ್ಧ ಮತ್ತು ಅನನ್ಯ ಕಾರ್ಯಕ್ರಮ ನಿರೂಪಿಸಿದರು.
ಉಪಪ್ರಾಂಶುಪಾಲ ಮತ್ತುಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ನೀಲಪ್ಪ ವಿ.,ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಾಮನ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸೌಮ್ಯ ಪ್ರವೀಣ್ ಕೆ., ಸ್ಟಾಫ್ ಸೆಕ್ರಟರಿ ಗೀತಾ ಕೆ., ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳಿಗೆ ಸಂಸ್ಕೃತ ರಸಪ್ರಶ್ನೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


