ಉಜಿರೆ: ಶ್ರೀ ಧ. ಮಂ. ಕಾಲೇಜಿನಲ್ಲಿ ಮಹಿಳಾ ಅಭಿವೃದ್ಧಿ ಕೋಶದ ವತಿಯಿಂದ ‘ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಮೂಲಕ ಆರೋಗ್ಯ ನಿರ್ವಹಣೆ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಮಹಿಳಾ ಕುಂದುಕೊರತೆ ನಿವಾರಣೆ ಕೋಶ ಮತ್ತು ಆಂತರಿಕ ದೂರು ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಸಮೃದ್ಧಿ ಆರಿಗ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಜೀವನದಲ್ಲಿ ಆರೋಗ್ಯವನ್ನು ಅಭಿವೃದ್ಧಿಪಡಿಸುವುದಕ್ಕೆ ಮುಖ್ಯವಾಗಿ ಶಿಸ್ತು ಅಗತ್ಯ. ಧ್ಯಾನ, ಯೋಗ ಮಾಡುವುದರಿಂದ ಮಾನಸಿಕ ತೊಂದರೆಗಳು ಕಡಿಮೆ ಆಗುತ್ತವೆ ಎಂದು ಅವರು ಹೇಳಿದರು.
“ರಾತ್ರಿ ಹೊತ್ತು ಬೇಗ ನಿದ್ದೆ ಮಾಡುವುದರಿಂದ ಒತ್ತಡಗಳು ನಿವಾರಣೆಯಾಗುತ್ತವೆ. ಮಿತ ಪ್ರಮಾಣದಲ್ಲಿ ಆಹಾರ ಸೇವಿಸಿ. ಹೊರಗಿನ ಆಹಾರವನ್ನು ಆದಷ್ಟು ತಪ್ಪಿಸಿ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಹಿಳಾ ಕುಂದುಕೊರತೆ ನಿವಾರಣೆ ಕೋಶ ಮತ್ತು ಆಂತರಿಕ ದೂರು ಸಮಿತಿ ಅಧ್ಯಕ್ಷೆ ದೀಪಾ ಆರ್.ಪಿ. ಸ್ವಾಗತಿಸಿ, ಮಹಿಳಾ ಅಭಿವೃದ್ಧಿ ಕೋಶದ ಸಂಯೋಜಕಿ ಅಕ್ಷತಾ ಜೈನ್ ವಂದಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಸ್ಫೂರ್ತಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
