ಆಂಗ್ಲ ಮಾಧ್ಯಮ -ದ್ವಿಭಾಷಾ- ತರಗತಿಯ ಉದ್ಘಾಟನೆ

Upayuktha
0



ಕುಳಾಯಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿಯ ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಯ ಉದ್ಘಾಟನಾ ಸಮಾರಂಭ ನೆರವೇರಿತು.


ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಉದ್ಘಾಟಿಸಿ ಸೃಜನಶೀಲ ಹಾಗೂ ಔದ್ಯೋಗಿಕ ನೆಲೆಗಟ್ಟಿನಲ್ಲಿ ಸರಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಮಾಧ್ಯಮವನ್ನು ದ್ವಿಭಾಷಾ ಮಾಧ್ಯಮ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಉತ್ತಮ ಶಿಕ್ಷಣ ಲಭ್ಯವಾಗುವಂತೆ ಮಾಡುವ ಹೊಣೆಗಾರಿಕೆ ಆಡಳಿತ ಮತ್ತು ಸಮಾಜದ್ದಾಗಿದೆ ಎಂದರು.


ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಮಾತನಾಡಿ ಆಂಗ್ಲ ಮಾಧ್ಯಮದ ಕಲಿಕೆಯ ಮೂಲಕ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದರು. ಕೂಳುರು ಮೊಗವೀರ ಮಹಾಸಭಾದ ಅಧ್ಯಕ್ಷ ಮತ್ತು ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಮಾತನಾಡಿ, ಇಂದಿನ ಸಂದರ್ಭದಲ್ಲಿ ಕನ್ನಡ ಭಾಷೆಯ ಕಲಿಕೆಯೊಂದಿಗೆ ಆಂಗ್ಲ ಮಾಧ್ಯಮ ಕಲಿಕೆಗೂ ಅವಕಾಶ ಕಲ್ಪಿಸಿಕೊಡುವುದು ಅಗತ್ಯ ಎಂದರು.


ಶ್ರೀನಿವಾಸ ರಾವ್, ಹಿರಿಯ ಶಿಕ್ಷಕಿಯರಾದ ಸುಕೇಶಿನಿ, ಸಿಂತಿಯ, ನೀತಾ ತಂತ್ರಿ, ರೂಪ ಹಾಗೂ ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.  ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು.


ಪುಷ್ಪಾವತಿ ಶ್ರೀನಿವಾಸ ರಾವ್ ಗೌರವ ಶಿಕ್ಷಕರಿಗಾಗಿ ಆರ್ಥಿಕ ಕೊಡುಗೆ ನೀಡಿದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top