ಶಿರ್ವ: ಹಿಂದು ಪಿ.ಯು ಕಾಲೇಜು ಮತ್ತು ಹಿಂದು ಹೈಸ್ಕೂಲು ಜಂಟಿ ಆಶ್ರಯದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಡಾ. ರವೀಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣಗೈದು, ದೇವರು ದೇಶ ಗುರು ಹಿರಿಯರನ್ನು ಪ್ರೀತಿಸಿ ಗೌರವಿಸಿದಾಗ ಬದುಕಿನಲ್ಲಿ ಭದ್ರತೆ ನೆಮ್ಮದಿ ಸಂತೃಪ್ತಿ ಸಂಪನ್ನಗೊಳ್ಳುತ್ತದೆ ಎಂದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಸುಂದರ ಮೇರಾ, ಟ್ರಸ್ಟ್ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಅಕಾಡೆಮಿಕ್ ಡೀನ್ ಗುರುಪ್ರಸಾದ್, ಟ್ರಸ್ಟಿ ಸತೀಶ್ ಹೆಗ್ಡೆ ಹಿರಿಯ ಉಪನ್ಯಾಸಕಿ ವಾಸಂತಿ ಬಾಯಿ ಉಪಸ್ಥಿತರಿದ್ದರು. ಉಪನ್ಯಾಸಕಿ ನಿಶಿತಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


