ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಉಪನ್ಯಾಸಮಾಲೆ-5 ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರುಗಿತು.
ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷ ಯದುಪತಿ ಗೌಡ ಇವರು ಸಭಾಧ್ಯಕ್ಷತೆ ವಹಿಸಿ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಂ.ಕೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಾ "ವಿನಾಯಕ ಕೃಷ್ಣ ಗೋಕಾಕ್ ರವರು ಕನ್ನಡದ ವಿಸ್ಮಯ ಕವಿ, ಗೋಕಾಕ್ ಚಳುವಳಿಯ ಹರಿಕಾರ, ವಿನಾಯಕ ಕಾವ್ಯ ನಾಮಾಂಕಿತರಾಗಿದ್ದು ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವವನ್ನು ಪಡಕೊಂಡರು. ಅವರ ಅಮೂಲ್ಯ ಬರಹಗಳು ಅವರಿಗೆ ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ತಂದುಕೊಟ್ಟಿತು. ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದು ಕನ್ನಡ ಸಾರಸ್ವತ ಲೋಕಕ್ಕೆ ಅವರು ನೀಡಿದ ಕೊಡುಗೆ ಸ್ತುತ್ಯರ್ಹವಾಗಿದೆ" ಎಂದರು.
ಅರ್ಥಶಾಸ್ತ್ರ ಉಪನ್ಯಾಸಕಿ ವಸಂತಿ ಪಿ. ಇವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್ ಇವರು ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ ಇವರು ವಂದಿಸಿದರು. ಈ ಸಂದರ್ಭದಲ್ಲಿ "ಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು" ಎಂಬ ವಿ ಕೃ ಗೋಕಾಕರ ಪ್ರಸಿದ್ಧ ಹಾಡನ್ನು ಪ್ರಸ್ತುತಪಡಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ