ಕಬಡ್ಡಿ ಪಂದ್ಯಾಟ; ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹುಡುಗರ ತಂಡಕ್ಕೆ ಪ್ರಥಮ ಸ್ಥಾನ

Upayuktha
0


ಹಾಲಾಡಿ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದುರಿ, ಹಾಲಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಹಾಲಾಡಿ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹುಡುಗರ ತಂಡವು ಪ್ರಥಮ ಸ್ಥಾನ ಪಡೆದು ವಿಜಯಶಾಲಿಯಾಯಿತು.


ಸಮಾರೋಪ ಸಮಾರಂಭದಲ್ಲಿ ತಂಡದ ನಾಯಕ 8ನೇ ತರಗತಿಯ ಸೃಜನ್ ಮಾರಿಗುಡ್ಡಿ ಮತ್ತು ಸಹ ಆಟಗಾರರಿಗೆ ಪಾರಿತೋಷಕ, ಪದಕ  ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.


ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರ್ಯ ಮಾರ್ಗದರ್ಶನ ನೀಡಿದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಕುಮಾರಿ ನಯನ ತಂಡ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ ವಿಜೇತ ತಂಡವನ್ನು ಅಭಿನಂದಿಸಿದರು.


ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top