ಅ 31: ಕಲ್ಲಚ್ಚು ಪ್ರಶಸ್ತಿ ಪ್ರದಾನ

Chandrashekhara Kulamarva
0



ಮಂಗಳೂರು: ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬೆಳ್ಳಿ ಹಬ್ಬ "ರಜತ ರಂಗು" ಸಂಭ್ರಮದಲ್ಲಿರುವ "ಕಲ್ಲಚ್ಚು ಪ್ರಕಾಶನದ" 16 ನೇ ಆವೃತ್ತಿಯ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭ ಅಗಸ್ಟ್ 31 ಭಾನುವಾರ ಸಂಜೆ 4.00 ಗಂಟೆಗೆ ಮಂಗಳೂರಿನ ಲಾಲ್ ಬಾಗ್ ಕರಾವಳಿ ಉತ್ಸವ ಮೈದಾನದ ಎದುರಿನ ಹ್ಯಾಟ್ ಹಿಲ್ ನಲ್ಲಿ ಇರುವ ಆಫೀಸರ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಲಿದೆ.


ಈಗಾಗಲೇ ಕರ್ನಾಟಕದ ಪಂಚ ಸಾಧಕರಾದ ಡಾ. ಎಸ್ ಎಂ ಶಿವಪ್ರಕಾಶ್, ಜಬೀವುಲ್ಲಾ ಎಂ ಅಸದ್, ಗೋಕಾವಿ ಗೆಳೆಯರ ಬಳಗ, ರೆಮೊನಾ ಎವೆಟ್ ಪೆರೇರಾ ಮತ್ತು ಡಾ ಪ್ರಕಾಶ ಕೇಶವ ನಾಡಿಗ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಘೋಷಣೆ ಆಗಿದ್ದು ಕಸಾಪದ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


ಸಾಹಿತಿ ಸಂತೋಷಕುಮಾರ ಮೆಹಂದಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಲಿರುವರು. ಕವಿ ರಘು ಇಡ್ಕಿದು ಅವರ ಅಭಿನಂದನಾ ಮಾತು ಹಾಗೂ ಎನ್ ಸುಬ್ರಾಯ ಭಟ್ ಅವರ ನಿರೂಪಣೆ ಇರುವ ಈ ಸಮಾರಂಭಕ್ಕೆ ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಮುಖ್ಯಸ್ಥ ಮಹೇಶ ಆರ್ ನಾಯಕ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top