'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ

Upayuktha
0


ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು.


ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು.


ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ, ಸಹಾನ್ ಕೋಡಿಕೆರೆ,  ಸತೀಶ್ ಮುಂಡಕಾಜೆ, ನರೇಶ್ ಪ್ರಭು, ಚೇತನ್ ಕಾಮತ್, ಅನಿಲ್ ಬೋಳೂರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top