ಚದುರಂಗ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ‌ ಆಯ್ಕೆ

Chandrashekhara Kulamarva
0


ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಾಮ್ ಸನ್ ಪ್ರೌಢಶಾಲೆ ಕಂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ   ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಇಬ್ಬರು ಹುಡುಗಿಯರು ಹಾಗೂ ಇಬ್ಬರು ಹುಡುಗರು ಇದ್ದಾರೆ.


17ರ ವಯೋಮಾನದೊಳಗಿನ ಹುಡುಗಿಯರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಪಿ ಶೆಟ್ಟಿ ಮತ್ತು 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸೌಜನ್ಯ  ಹಾಗೂ 17ರ ವಯೋಮಾನದ  ಹುಡುಗರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಮನ್ವಿತ್ ಬಿ ಮತ್ತು 8ನೇ ತರಗತಿ ವಿದ್ಯಾರ್ಥಿ ರಿತೇಶ್ ಕುಮಾರ್ ಎ.ಕೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು ಸೂರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ತಂಡ ವ್ಯವಸ್ಥಾಪಕರಾಗಿ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಕಾವ್ಯಾ ಶೆಟ್ಟಿ ನಿರ್ವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top