ಎಸ್‌ಡಿಎಂಸಿ ಸಸ್ಯಶಾಸ್ತ್ರ ವಿಭಾಗದಿಂದ ನಿಡ್ಲೆಯಲ್ಲಿ Lab In Cab ಕಾರ್ಯಕ್ರಮ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನಿಡ್ಲೆ Lab In Cab ಕಾರ್ಯಕ್ರಮವನ್ನು ಇಂದು (ಆ.6) ಹಮ್ಮಿಕೊಳ್ಳಲಾಯಿತು. ಶಾಲೆಯ 8,9 ಹಾಗೂ 10ನೇ ತರಗತಿಯಲ್ಲಿ ಕಲಿಯುತ್ತಿರುವ 77 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.


ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ ಮೊಸರಿನಲ್ಲಿ ಇರುವ ಅತ್ಯಂತ ಪ್ರಯೋಜನಾಕಾರಿ ಬ್ಯಾಕ್ಟೀರಿಯಾ ಆಗಿರುವ Lactobacillus ಅನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಾ ಶೆಟ್ಟಿ ಅವರು ಉಪಸ್ಥಿತರಿದ್ದು, ಶುಭಹಾರೈಸಿದರು.


ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ. ಎಸ್. ಕಾರ್ಯಕ್ರಮವನ್ನು ಆಯೋಜಿಸಿದರು. ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ ಹಾಗೂ ರಂಜನ್ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top