ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಮತ್ತು ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನ ಸಹಯೋಗದಲ್ಲಿ ಪ್ರೊ.ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಶ್‍ಚಂದ್ರ ಬೋಸರ ಮೂರು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಆಗಸ್ಟ್ 31 ರಂದು ಮಧ್ಯಾಹ್ನ 1:30 ಗಂಟೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಕೊಲ್ಕತ್ತಾ ನೇತಾಜಿ ಸುಭಾಷ್ ಚಂದ್ರ ಬೋಸ್ ಟ್ರಸ್ಟ್ ನಿರ್ದೇಶಕ ಪ್ರೊ. ಸಮಂತ್ರ ಬೋಸ್ ಆಗಮಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ