ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಭೂಮಿ ಪೂಜೆಯು ನೆರವೇರಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು.
ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಮುಖರಾದ, ವಿಜಯ್ ಕುಮಾರ್ ಶೆಟ್ಟಿ, ಪ್ರವೀಣ್ ನಿಡ್ಡೇಲ್, ರಾಮ್ ಪ್ರಸಾದ್, ನವೀನ್ ಶೆಣೈ, ಹರೀಶ್, ಪುರುಷೋತ್ತಮ, ವೀರೇಂದ್ರ, ಸುಕೇಶ್, ಸುನಿಲ್, ಉಮೇಶ್, ಮೋಹನ್ ದಾಸ್, ವೇಣು ಗೋಪಾಲ್, ಸುಧಾಕರ್, ಮುಕೇಶ್, ವಾರ್ಡಿನ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


