ಅಧಿವೇಶನದಲ್ಲಿ ಜೈಲ್ ಜಾಮರ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಶಾಸಕ ಕಾಮತ್

Upayuktha
0


ಬೆಂಗಳೂರು: ಮಂಗಳೂರಿನ ಕೊಡಿಯಾಲಬೈಲ್ ಪ್ರದೇಶದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಹಾಕಲಾಗಿರುವ ಜಾಮ‌ರ್ ನಿಂದಾಗಿ ಕಳೆದ 6 ತಿಂಗಳಿನಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 


ಈ ಪ್ರದೇಶದ ಸುತ್ತಮುತ್ತ ಎರಡು ಕಿಲೋಮೀಟರ್ ವರೆಗೆ ಹಲವಾರು ವಸತಿ ಸಮುಚ್ಚಯಗಳಿಗೆ ಮೊಬೈಲ್ ಕರೆ ಬರುತ್ತಿಲ್ಲ. ಅಂಗಡಿ, ಹೋಟೆಲ್, ಎಲ್ಐಸಿ ಸೇರಿದಂತೆ ಎಲ್ಲೆಡೆ ಆನ್ ಲೈನ್ ವಹಿವಾಟು ಇಲ್ಲದೇ ವ್ಯಾಪಾರ-ವಹಿವಾಟುಗಳಿಗೆ ಭಾರಿ ಹಿನ್ನಡೆಯಾಗಿದೆ. ಇದೇ ವ್ಯಾಪ್ತಿಯಲ್ಲಿ ಬರುವ ಮಂಗಳೂರು ಮಹಾನಗರ ಪಾಲಿಕೆ, ಹತ್ತಾರು ಬ್ಯಾಂಕ್ ಗಳು, ಹಲವು ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಪಕ್ಕದಲ್ಲೇ ಇರುವ ನ್ಯಾಯಾಲಯದ ಕಲಾಪಕ್ಕೂ ನೆಟ್ವರ್ಕ್ ಸಮಸ್ಯೆ ಆಗಿರುವುದು ಗಂಭೀರ ವಿಚಾರ. ದಿಲ್ಲಿಯ ಟೆಲಿ ಕಮ್ಯುನಿ ಕೇಷನ್ ಕನ್ಸಲೆಂಟ್‌ ತಂತ್ರಜ್ಞರು ಮಂಗಳೂರಿಗೆ ಬಂದು ಪರಿಶೀಲನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.


ಜೈಲಿನೊಳಗೆ ಜಾಮರ್ ಹಾಕಿದ್ದರೂ ಒಳಗಿನ ಖೈದಿಗಳಿಗೆ ನೆಟ್ವರ್ಕ್ ಸಿಗುತ್ತಿದೆ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಆದರೆ ಜೈಲಿನ ಹೊರಗಿರುವ ಸಾರ್ವಜನಿಕರಿಗೆ ಮಾತ್ರ ಈ ಕಾಟ ತಪ್ಪಿಲ್ಲ. ಇದು ಯಾವ ನ್ಯಾಯ? ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಾಗಿದೆ ಇಲ್ಲಿನ ಪರಿಸ್ಥಿತಿ. ಇದರ ವಿರುದ್ಧ ಹತ್ತಾರು ಪ್ರತಿಭಟನೆಗಳು ನಡೆದರೂ ಫಲಿತಾಂಶ ಮಾತ್ರ ಶೂನ್ಯ. ಶೀಘ್ರದಲ್ಲಿ ಇದಕ್ಕೊಂದು ಮುಕ್ತಿ ಕೊಡಿ ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top