ಇನ್ನಂಜೆ: 'ಮಕ್ಕಳಿಗಾಗಿ ಕಾರಂತರು' ಕಾರ್ಯಕ್ರಮ ನಾಳೆ

Upayuktha
0


ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಎಸ್.ವಿ.ಹೆಚ್ ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಕಾರಂತರು-3 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಾ.ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಿಗ್ಗೆ 10.15 ಕ್ಕೆ ಇನ್ನಂಜೆಯ ಎಸ್.ವಿ.ಹೆಚ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.

 

ಕಾರ್ಯಕ್ರಮವನ್ನು ಎಸ್.ವಿ.ಹೆಚ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ.


ನಿವೃತ್ತ ಶಿಕ್ಷಕ ಸತ್ಯ ಸಾಯಿಪ್ರಸಾದ್ ಬಂಟಕಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ಉಪನ್ಯಾಸ ನೀಡಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top