ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದಕ್ಷಿಣ ಕನ್ನಡ ಇವರಿಂದ ರೂ. 1,500 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.750) ಚಲನ್/‌ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ.ಡಿ. ಮುಖಾಂತರ ಪಾವತಿಸಿ ಪಡೆಯಬಹುದಾಗಿದೆ.


ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ದಿನಾಂಕ 30.08.2025 ರ ಒಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್  www.mangaloreuniversity.ac.in  ನಿಂದ ಪಡೆದುಕೊಳ್ಳಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top