ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಸೆರೆ

Upayuktha
0


ಮಂಗಳೂರು: ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು (ಶುಕ್ರವಾರ) ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು.


ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು,  ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿದ್ದಾರೆ. 


ಬಂಧಿತ ಆರೋಪಿಗಳ ವಿವರ:

1. ಮಸೂದ್ ಎಂಕೆ ಪ್ರಾಯ: 45 ವರ್ಷ ತಂದೆ: ದಿ|| ಖಾಲೀದ್ ಹಾಜಿ, ವಾಸ: ಮೊಗರು ಹೌಸ್, ಆಡೂರು, ಉರ್ದೂರು ಪೋಸ್ಟ್ ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ 

2. ಹೆಸರು ಮೊಹಮ್ಮದ್ ಆಶಿಕ್, ಪ್ರಾಯ: 24 ವರ್ಷ ತಂದೆ: ದಿ|| ಎಮ್ ಪಿ ಅಬ್ದುಲ್ಲಾ ವಾಸ: ಚೆಂದಮೂಲ ಹೌಸ್, ಪರಪ್ಪ ದೇಲಂಪಾಡಿ ಪರಪ್ಪ ಪೋಸ್ಟ್,  ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ 

3. ಸುಬೇರ್; ಪ್ರಾಯ: 30 ವರ್ಷ ತಂದೆ: ಇಬ್ರಾಹಿಂ ವಾಸ: ಪರಪ್ಪ ದೇಲಂಪಾಡಿ ಪರಪ್ಪ ಪೋಸ್ಟ್, ಕಾಸರಗೋಡು ತಾಲೂಕು ಮತ್ತು ಜಿಲ್ಲೆ ಕೇರಳ ರಾಜ್ಯ



ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 


ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತದೆ. ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top