ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಅವರು ಧ್ವಜಾರೋಹಣವನ್ನು ನೆರವೇರಿಸಿ, 'ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಗಳಾದ ಸಾಮರಸ್ಯ, ಕುಟುಂಬ ಪ್ರಬೋಧನ, ಪರಿಸರ ಸಂರಕ್ಷಣೆ, ಸ್ವದೇಶಿ ವಸ್ತುಗಳ ಬಳಕೆ, ನಾಗರಿಕ ಶಿಷ್ಟಾಚಾರದ ಪಾಲನೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು' ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶತಾಬ್ದಿ ವಿದ್ಯಾಲಯ ಸಮಿತಿ ಸಂಚಾಲಕ ನಾರಾಯಣ ಫಡ್ಕೆ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ, ಮೂರೂ ಶಿಕ್ಷಣ ಸಂಸ್ಥೆಗಳ ವಿಭಾಗದ ಮುಖ್ಯಸ್ಥರು, ಬೋಧಕ- ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


