ಅಲೋಶಿಯಸ್ ವಿವಿಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

Upayuktha
0


ಮಂಗಳೂರು: ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಅಂಗವಾಗಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಇಂದು (ಆ. 23) ವಿಜೃಂಭಣೆಯಿಂದ ಆಚರಿಸಲಾಯಿತು. 


ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಪ್ರಮೋದ ಕುಮಾರ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಮೂಲವಿಜ್ಞಾನದ ಅವಶ್ಯಕತೆಗಳನ್ನು ಮತ್ತು ವಿಜ್ಞಾನಿಗಳ ಸಹಯೋಗದಿಂದ ಭಾರತ ಕಂಡ ಪ್ರಗತಿಯನ್ನು ವಿವರಿಸಿದರು. ಭಾರತ ಕಳೆದ 75 ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಪ್ರಗತಿಯಲ್ಲಿ ವಿಜ್ಞಾನಿಗಳ ಕೊಡುಗೆಗಳನ್ನು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ವಿಜ್ಞಾನದಲ್ಲಿ ಅಗಣಿತ ಅವಕಾಶಗಳು ಹರಿದುಬರಲಿವೆ. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.


ಅಲೋಶಿಯಸ್ ವಿವಿಯ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಭಾರತದ ಕನಸುಗಳು ವಿದ್ಯಾರ್ಥಿಗಳಿಗೆ ಕನಸುಗಳಾಗಿ ಪರಿವರ್ತನೆಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದರು. ವಿಜ್ಞಾನಿಗಳ ಪ್ರಯತ್ನಗಳು ದೇಶದ ಜನರನ್ನು ಸುರಕ್ಷಿತವಾಗಿರಿಸಿದೆ ಮತ್ತು ಆತ್ಮನಿರ್ಭರತೆಯನ್ನು ಸಾಧಿಸುವಲ್ಲಿ ಸಫಲವಾಗಿದೆ ಎಂದು ತಿಳಿಸಿದರು.


ಕ್ಸೇವಿಯರ್ ಬ್ಲಾಕಿನ ನಿರ್ದೇಶಕ ಡಾ. ಈಶ್ವರ ಭಟ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಾಹ್ಯಾಕಾಶ ದಿನದ ಪ್ರಾಮುಖ್ಯತೆಯನ್ನು ವಿವರಿಸಿ ಎಲ್ಲರನ್ನೂ ಸ್ವಾಗತಿಸಿದರು.


ವಿವಿಯ ಕುಲಸಚಿವ ಡಾ. ರೊನಾಲ್ಡ್ ನಜರೆತ್, ವಿಜ್ಞಾನ ವಿಭಾಗದ ಡೀನ್ ಡಾ. ಅರುಣಾ ಕಲ್ಕೂರ್, ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ನೀಲಕಂಠನ್, ರಿಸರ್ಚ್ ಕೊಆರ್ಡಿನೇಟರ್ ಡಾ. ಚಂದ್ರಶೇಖರ ಶೆಟ್ಟಿ ಟಿ. ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 


ಈ ಸಂದರ್ಭದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಅನೇಕ ವೈಜ್ಞಾನಿಕ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕು. ಶರೋಲಿನ್ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರ್ಷಿತ್ ವಂದಿಸಿದರು. 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top