ಆಗಸ್ಟ್ 2; ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿಪ್ರದಾನ ಸಮಾರಂಭ

Chandrashekhara Kulamarva
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 17 ನೇ ಪದವಿಪ್ರದಾನದ ಸೆಶನ್-2 ಸಮಾರಂಭವು ಆಗಸ್ಟ್ 2ರಂದು ಬೆಳಿಗ್ಗೆ 1೦ ಗಂಟೆಗೆ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಜರಗಲಿದೆ. 


2025ನೇ ಸಾಲಿನಲ್ಲಿ ಬಿ.ಇ ಪದವೀಧರರಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್, ಇನ್ಫೋರ್ಮೇಶನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಹಾಗೂ ಬಿ.ಎಸ್ಸಿ (ಹಾನರ್ಸ್) ವಿದ್ಯಾರ್ಥಿಗಳ ಪದವಿಪ್ರದಾನಕ್ಕಾಗಿ ಈ ಸಮಾರಂಭವನ್ನು ಆಯೋಜಿಸಲಾಗಿದೆ.


wrkwrk, 99ಗೇಮ್ಸ್, ರೋಬೋಸಾಫ್ಟ್ ಸಂಸ್ಥೆಗಳ ಸ್ಥಾಪಕ ರೋಹಿತ್ ಭಟ್ ಅವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿಪ್ರದಾನ ಭಾಷಣವನ್ನು ಮಾಡಲಿರುವರು. ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.


ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಎಸ್ ಮೂಡಿತ್ತಾಯ ಹಾಗೂ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ ಮುಗೆರಾಯ ಗೌರವ ಅತಿಥಿಗಳಾಗಿ ಭಾಗವಹಿಸುವರು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪ್ರದಾನ ಮಾಡಲಾಗುವುದು ಮತ್ತು ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು.


ಕಾರ್ಯಕ್ರಮವನ್ನು ಲೈವ್‌ಸ್ಟ್ರೀಮ್ ಮೂಲಕ ನೋಡಬಹುದಾಗಿದ್ದು, youtube.com/c/NMAMInstituteofTechnology ಲಿಂಕ್‌ ಮೂಲಕ ಸಾರ್ವಜನಿಕರಿಗೆ ಲಭ್ಯವಿದೆ ಎಂದು ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್  ತಿಳಿಸಿದ್ದಾರೆ.




Post a Comment

0 Comments
Post a Comment (0)
To Top