ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ಓಣಂ ಹಬ್ಬವನ್ನು ಹಾಗೂ ಅಧ್ಯಾಪಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಹೂವಿನ ರಂಗೋಲಿಯನ್ನು ರಚಿಸಿದರು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ ಕೇರಳದ ಸಾಂಪ್ರದಾಯಿಕ ಉಡುಗೆಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಧ್ಯಾಹ್ನ ಓಣಂನ ವಿಶೇಷ ಔತಣಕೂಟವನ್ನು ಆಯೋಜಿಸಲಾಗಿತ್ತು. ಭೋಜನದ ನಂತರ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅಧ್ಯಾಪಕ ದಿನದ ಅಂಗವಾಗಿ ಅಧ್ಯಾಪಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದರು.
ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಓಣಂ ಹಬ್ಬವನ್ನು ಆಚರಿಸುವ ಉದ್ದೇಶವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮುಖ್ಯ ಶಿಕ್ಷಕ ಶ್ರೀ ಶ್ಯಾಮ್ ಭಟ್ ದರ್ಬೆಮಾರ್ಗ ಮಕ್ಕಳಿಗೆ ಓಣಂ ಶುಭಾಶಯ ಹೇಳಿದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್. ಎಸ್ ಪ್ರಸಾದ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ ಹಾಗೂ ರಕ್ಷಕರು, ಅಧ್ಯಾಪಕ ವೃಂದ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ