ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಬೇಕು: ಮಂಜುನಾಥ್

Upayuktha
0


ಹಾಸನ: ನಮ್ಮ ಭಾರತ ದೇಶ ಮುಂದಿನ ದಿನಗಳಲ್ಲಿ ವಿಶ್ವಕ್ಕೆ ಮಾದರಿ ದೇಶವಾಗಬೇಕು. ಪ್ರಸ್ತುತ ಸನ್ನಿವೇಶದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಪರಿಹರಿಸಿಕೊಂಡು ಸರ್ವಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಬೇಕು. ಸ್ವಾತಂತ್ರ್ಯವು  ನಮ್ಮ ಹಕ್ಕು ಆಗಿದ್ದು ಅದು ಎಲ್ಲೂ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಇಂದಿನ ಮಕ್ಕಳಲ್ಲಿ ದೇಶಾಭಿಮಾನ ಬೆಳೆಯಬೇಕು ಎಂದು ಗಂಧದ ಕೋಠಿ ಅವರಣದಲ್ಲಿರುವ ಜಿ.ಜಿ.ಜೆ.ಸಿ. ಪ್ರಧಾನ ಶಾಲೆಯ ಉಪಪ್ರಾಂಶುಪಾಲರಾದ ಮಂಜುನಾಥ್ ಹೇಳಿದರು.  


ನಗರದ ಆರ್. ಸಿ. ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರಧಾನ) ಹಾಗೂ ಪ್ರೌಢಶಾಲಾ ವಿಭಾಗ ಇಲ್ಲಿ ಆಯೋಜನೆಗೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಒಂದೊಮ್ಮೆ ವ್ಯಾಪಾರಕ್ಕಾಗಿ ಬಂದ ಪರಕೀಯರು ನಮ್ಮ ದೇಶದ ಸಂಪತ್ತನ್ನು ಶತಮಾನಗಳ ಕಾಲ ಲೂಟಿ ಮಾಡಿದರು. ನಮ್ಮ ಸ್ವಾತಂತ್ರ್ಯವನ್ನು ಕಬಳಿಸಿದರು. ನಲ್ನ ರಾಷ್ಟ್ರವನ್ನು ಮತ್ತೆ ಸ್ವಾತಂತ್ರ್ಯಗೊಳಿಸಲು ಮಹಾತ್ಮಾ ಗಾಂಧೀಜಿ ಅವರ ನಾಯಕತ್ವದಲ್ಲಿ ನಿರಂತರ ಹೋರಾಟ ಮಾಡಿ ಸ್ವಾತಂತ್ರ್ಯವನ್ನು ಗಳಿಸಿದ್ದೇವೆ. ಇದನ್ನು ಉಳಿಸಿ ಮುಂದವರಿಸಿಕೊಂಡು ಹೋಗುವುದು ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಬೇಕು ಎಂದು ಹೇಳಿದರು. 


ಕಾರ್ಯಕ್ರಮ ಉದ್ದೇಶಿಸಿ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್. ಚಿದಾನಂದ ಅವರು ಮಾತನಾಡುತ್ತಾ, ಸ್ವಾತಂತ್ರ್ಯವೆಂದರೆ ಬರೀ ಹಕ್ಕಲ್ಲ. ಸ್ವಾಭಿಮಾನಿ ಹೋರಾಟದ ಪ್ರತಿಫಲವಾಗಿದೆ. ಸ್ವಾತಂತ್ಯ ದಿನಾಚರಣೆ ಕೇವಲ ಹಬ್ಬವಲ್ಲ ಅದು ಭಾರತೀಯರ ತ್ಯಾಗ ಬಲಿದಾನಗಳನ್ನು ಸ್ಮರಿಸುವ ಸುವರ್ಣ ಸಂದರ್ಭವಾಗಿದೆ. ಭಾರತದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ದಾಖಲೆಯಾದ ಚಿರಸ್ಮರಣೀಯ ದಿನವೆಂದರೆ 1947ರ ಆಗಸ್ಟ್ 15. ಈ ದಿನದಂದು ನಮ್ಮ ಭಾರತವು ದೇಶವು ಬೃಹತ್ ವಸಾಹತುಶಾಹಿ ಇಂಗ್ಲಿಷರ ಆಳ್ವಿಕೆಯಿಂದ ಬಿಡುಗಡೆಯಾದ ಕ್ಷಣ ಎಂದರು.


ನಮ್ಮ ಸ್ವತಂತ್ರ ಭಾರತವು ಭವಿಷ್ಯದ ದೃಷ್ಟಿಕೋನ ಹೊಂದಿದ್ದು, “2047 ರಲ್ಲಿ ವಿಶ್ವಗುರು ಭಾರತ” ವಾಗಬೇಕು ಎಂಬ ಗುರಿಯನ್ನು ಹೊಂದಿದೆ. ವಿಜ್ಞಾನ- ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸುವುದು, ಗ್ರಾಮೀಣ ಮತ್ತು ನಗರಾಭಿವೃದ್ಧಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು, ವಿಶ್ವಸಹಕಾರ, ಶಾಂತಿ ಮತ್ತು ಮಾನವ ಹಕ್ಕುಗಳ ರಕ್ಷಣೆ ಮಾಡುವುದು ಅತೀ ಮುಖ್ಯವಾಗಿದೆ. ಇಂದು ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2047 ರ ನೂರು ವರ್ಷಗಳ ಶತಮಾನದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ದೇಶದ ಬಲಿಷ್ಟ ಮತ್ತು ಪ್ರಾಮಾಣಿಕ ಯುವಶಕ್ತಿಯಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸುಭದ್ರ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರದ ಕನಸನ್ನು ನನಸಾಗಿಸಲು ಸಾಧ್ಯವಾಗುತ್ತದೆ. ಸಾಮಾಜಿಕ, ಸಾಂಸ್ಕೃತಿಕ ಶೈಕ್ಷಣಿಕ, ಆರ್ಥಿಕ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಇಂದು ನಮ್ಮ ರಾಷ್ಟ್ರ ಸಾಕಷ್ಟು ಸಾಧನೆ ಮಾಡಿದೆ ಎಂದು ಹೇಳಿದರು. 


ಕಾಲೇಜಿನ ಪ್ರಾಂಶುಪಾಲರಾದ ಅನ್ನಪೂರ್ಣ ರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶ ನೀಡಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ಪ್ರೌಢಶಾಲೆಯ ಎಲ್ಲಾ ಸಹಶಿಕ್ಷಕರು ಮತ್ತು ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಸಹ ಶಿಕ್ಷಕ ರುದ್ರೇಶ್ ರವರು ಕಾರ್ಯಕ್ರಮ ನಿರೂಪಿಸಿದರೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಕ್ಕಳಿಗೆ ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top