ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಗುರುವಾರ (ಆಗಸ್ಟ್ 07) 2025-26 ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.
ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಸೈಕಾಲಜಿ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಒತ್ತಡ ನಿಭಾಯಿಸುವ ಸಾಮರ್ಥ್ಯ, ಸಮಯದ ನಿರ್ವಹಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅವರು ಮಾಹಿತಿ ನೀಡಿದರು.
ವಿಕಸನ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳ ಮೂಲಕ ವಿದ್ಯಾರ್ಥಿನಿಯರಿಗೆ ಅರ್ಥ ಆಗುವ ರೀತಿಯಲ್ಲಿ ಮಾಹಿತಿ ನೀಡಿದರು.
ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಕಾರ್ಯಕ್ರಮ ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ