ಹಿರಿಯ ಅಂಚೆ ಅಧೀಕ್ಷಕ ಎಂ. ಸುಧಾಕರ ಮಲ್ಯ ಮಾಹಿತಿ
ಮಂಗಳೂರು: ಭಾರತೀಯ ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆ ಅತ್ಯಂತ ಸರಳವಾದ ಹಾಗೂ ಜನಸಾಮಾನ್ಯರ ಕೈಗೆಟುಕುವ ಉಪಯುಕ್ತ ವಿಮಾ ಯೋಜನೆಯಾಗಿದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ. ಸುಧಾಕರ ಮಲ್ಯ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ನಡೆದ 10 ಲಕ್ಷ ರೂ. ಮೊತ್ತದ ಉಚಿತ ವಿಮಾ ಯೋಜನೆಯ ನೋಂದಣಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅಂಚೆ ಇಲಾಖೆಯ ಈ ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಸಾಲಿನಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ಮಂಗಳೂರು ವಿಭಾಗದಲ್ಲಿ 21 ಸಾವಿರ ಮಂದಿ ಅಪಘಾತ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಅಂಚೆ ಇಲಾಖೆಯ ಉಪ ಅಧೀಕ್ಷಕ ದಿನೇಶ್ ಮತ್ತು ಐಪಿಪಿಬಿ ಮ್ಯಾನೇಜರ್ ಸುಬ್ರಹ್ಮಣ್ಯ ಅವರು ಅಂಚೆ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ