ಧರ್ಮಸ್ಥಳ ಕ್ಷೇತ್ರ ವಿರುದ್ಧ ಅಪಪ್ರಚಾರದ ಷಡ್ಯಂತ್ರ: ಎನ್‌ಐಎ ತನಿಖೆ ನಡೆಸಿ

Upayuktha
0

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹ




ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯವಸ್ಥಿತ ಜಾಲ ಕಾರ್ಯಾಚರಿಸಿ ಷಡ್ಯಂತ್ರ ನಡೆಸಿದೆ. ಈ ಷಡ್ಯಂತ್ರ ಭೇದಿಸಲು ಎನ್‌ಐಎ ತನಿಖೆ ನಡೆಸಬೇಕು. ಈ ಬಗ್ಗೆ ಬಿಜೆಪಿ ವತಿಯಿಂದ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.


ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಸುವವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣಕಾಸು ಪೂರೈಕೆಯಾಗಿರುವ ಸಂಶಯವಿದೆ. ಯೂಟ್ಯೂಬರ್‌ಗಳು ಸೇರಿದಂತೆ ಹಲವರು ವಿಡಿಯೋ ಮಾಡಿ ಹಿಂದು ಧಾರ್ಮಿಕ ನಂಬಿಕೆ ಮೇಲೆ ಸವಾರಿ ನಡೆಸಿದ್ದಾರೆ. ಎಡಪಂಥೀಯರ ಒತ್ತಡದಿಂದ ಎಸ್‌ಐಟಿ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದರು. ಮುಂದಕ್ಕೆ ತನಿಖೆ ವೇಳೆ ಒತ್ತಡ ಹೆಚ್ಚಾಗಬಹುದು. ಈ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆ ನಡೆಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.


ಪ್ರಸಕ್ತ ನಡೆಯುತ್ತಿರುವ ಎಸ್‌ಐಟಿ ತನಿಖೆ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಹಿಂದೂ ಧರ್ಮ ಕ್ಷೇತ್ರದ ಬಗ್ಗೆ ಆರೋಪಿಸಿ ಎಐ ಮೂಲಕ ಸಮೀರ್ ಎಂ.ಡಿ. ಮಾಡಿರುವ ವಿಡಿಯೋದಿಂದ ಪ್ರಕರಣ ಅಂತಾರಾಷ್ಟ್ರೀಯವಾಗಿ ಪ್ರಸಾರವಾಗಿದೆ. ಇದಕ್ಕೆ ಸಾಕಷ್ಟು ಹಣ ಪೂರೈಕೆಯಾಗಿರುವ ಅನುಮಾನವಿದೆ ಎಂದ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಿದ ಸಮೀರ್‌ನನ್ನು ರಾಜ್ಯ ಸರಕಾರ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಧರ್ಮಸ್ಥಳದ ಪ್ರಕರಣದಲ್ಲಿ ಒಂದೆಡೆ ಸಮೀರ್ ಹಾಗೂ ಇನ್ನೊಂದೆಡೆ ಕ್ರೈಸ್ತ ಮತಪ್ರಚಾರಕನೊಬ್ಬನ ಪಾತ್ರವೇನು? ಬೇರೆ ಧರ್ಮಕ್ಕೆ ಸೇರಿದ ಇವರೆಲ್ಲರೂ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಯಾಕೆ ಮಾಡಿದ್ದಾರೆ ಎಂಬುದು ತಿಳಿಯಬೇಕು ಎಂದು ಅವರು ಹೇಳಿದರು.


ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಶಾಸಕ ಡಾ.ವೈ. ಭರತ್ ಶೆಟ್ಟಿ, ಪ್ರಸ್ತುತ ನಡೆಯುತ್ತಿರುವ ಎಸ್‌ಐಟಿ ತನಿಖೆ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಧರ್ಮಸ್ಥಳ ಕ್ಷೇತ್ರದ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ಅದಕ್ಕೆ ಸಾಕಷ್ಟು ಮಂದಿ ಪ್ರಾಯೋಜ ಕತ್ವ ನೀಡಿದ್ದಾರೆ. ಹಣದ ವ್ಯವಹಾರ ನಡೆದಿದೆ. ಎಐ ವಿಡಿಯೋ ಮಾಡಿ ಹಂಚಲು ಹಣದ ಅಗತ್ಯವಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಹೇಳಿದರು.


ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕೋಶಾಧಿಕಾರಿ ಸಂಜಯ ಪ್ರಭು, ವಸಂತ ಪೂಜಾರಿ ಉಪಸ್ಥಿತರಿದ್ದರು.



ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಭೇಟಿ

ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲೆಡೆಯಿಂದ ಒಂದು ಲಕ್ಷ ಮಂದಿ ಬಿಜೆಪಿ ಕಾರ್ಯಕರ್ತರು ಸೆ. 1ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕರೆಯಂತೆ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವ್ಯವಸ್ಥೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತಂಡ ರಚಿಸಲಾಗುವುದು ಎಂದು ಸತೀಶ್ ಕುಂಪಲ ತಿಳಿಸಿದರು.


ಸೌಜನ್ಯ ಪ್ರಕರಣ ಮರುತನಿಖೆಯಾಗಲಿ

ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಇತರ ದೌರ್ಜನ್ಯಗಳ ಆರೋಪಗಳ ಬಗ್ಗೆ ಎಸ್ ಐಟಿ ಸೇರಿದಂತೆ ಯಾವುದೇ ತನಿಖೆಗೆ ನಮ್ಮ ಅಭ್ಯಂತರವಿಲ್ಲ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಇನ್ನು ಯಾವ ರೀತಿಯ ತನಿಖೆಗೆ ಆಗಬೇಕೋ ಅದು ಆಗಲಿ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top