ಮಂಗಳೂರು: ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಪುಂಡಲೀಕ ಪೈ (ಅನ್ನು ಮಂಗಳೂರು), ಪ್ರಧಾನ ಕಾರ್ಯದರ್ಶಿಯಾಗಿ ರವಿ ಪೊಸವಣಿಕೆ ಹಾಗೂ ಖಜಾಂಚಿಯಾಗಿ ಹರ್ಷ ಆಯ್ಕೆಯಾಗಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಪ್ರಧಾನ ಕಾರ್ಯದರ್ಶಿ ವೇಣುವಿನೋದ್ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಟ್ರಸ್ಟ್ ಸದಸ್ಯರಾದ ಕೆ. ಆನಂದ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಪುಪ್ಪರಾಜ್. ಬಿ. ಎನ್., ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಉಪಸ್ಥಿತರಿದ್ದರು.
ಪತ್ರಿಕಾ ಭವನ ಟ್ರಸ್ಟ್‌ನಿಂದ ಪತ್ರಕರ್ತರ ಆರೋಗ್ಯ ಸಮಸ್ಯೆಗೆ ನೆರವು ಮತ್ತು ಮೃತ ಪತ್ರಕರ್ತರ ಕುಟುಂಬಕ್ಕೆ ಪರಿಹಾರವಾಗಿ 7.47 ಲಕ್ಷ ರೂ. ನೆರವು ನೀಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಮಹೋತ್ಸವದ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಒಟ್ಟು 5 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ