ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥರಾದ ಭೀಮ ಭಾರಧ್ವಾಜ್ ಅವರು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ, ನೀಟ್, ಸಿ.ಇ.ಟಿ ಪರೀಕ್ಷಾ ತರಬೇತಿಗಳ ಕುರಿತಾಗಿ ಸವಿವರವಾದ ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪೋಷಕರಿಗೆ ತಲುಪಿಸುವ ಉದ್ದೇಶಕ್ಕಾಗಿ ಬಳಸಲಾಗುವ EDUPI APPನ ಬಗ್ಗೆ ಮಾಹಿತಿಯನ್ನು ಗಣಕಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ಯಾಮ ಪ್ರಸಾದ ಇವರು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಂಬAಧಿಸಿದ ವಿಚಾರಗಳ ಕುರಿತು ಪೋಷಕರನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಹರ್ಷಿತಾ ಪಿ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಸ್ನೇಹಾ ಬಿ ಎಸ್ ನಿರೂಪಿಸಿ, ವಂದಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ