ವಿವೇಕಾನಂದ PU ಕಾಲೇಜಿನಲ್ಲಿ ಸಾಹಿತ್ಯ ಸಂಘದ ಉದ್ಘಾಟನೆ

Upayuktha
0

 


 

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಉದ್ಘಾಟಕರಾಗಿ  ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ಭಾಷಾ ವಿಭಾಗದ ಪ್ರಾಧ್ಯಾಪಕರಾದ ಡಾ| ಗೀತಾಕುಮಾರಿ ಟಿ ಇವರು ಉಪಸ್ಥಿತರಿದ್ದು,  ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. 


ಬಳಿಕ ಮಾತನಾಡಿದ ಅವರು  "ಸಾಹಿತ್ಯವು ಜೀವನ ಮೌಲ್ಯವನ್ನು ರೂಪಿಸುವಂತಹ ಒಂದು ಕಲೆ. ಅದು ಬದುಕಿಗೆ ಭರವಸೆಯನ್ನು ನೀಡಿ ಒಂದು ವಿಶಿಷ್ಟ ವ್ಯಕ್ತಿತ್ವವನ್ನು ಕಟ್ಟಿಕೊಡುವುದರ ಮೂಲಕ ಮಹತ್ತರವಾದ ಸ್ಥಾನವನ್ನು ವಹಿಸುತ್ತದೆ. ಸಾಹಿತ್ಯದ ಓದು ಅರಿವಿನ ವಿಸ್ತಾರದ ಜೊತೆಗೆ ಸಮಾಜವನ್ನು ವೀಕ್ಷಿಸುವ ಹೊಸ ದೃಷ್ಟಿಕೋನವನ್ನು ನೀಡುತ್ತದೆ " ಎಂದರು.  


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ. ಎಂ  ವಹಿಸಿಕೊಂಡರು. ವೇದಿಕೆಯಲ್ಲಿ ಸಾಹಿತ್ಯ ಸಂಘದ ಸಂಯೋಜಕರಾದ ರತ್ನಾವತಿ ಬಿ. ಉಪಸ್ಥಿತರಿದ್ದರು.  ಕಲಾ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಾಮಾಜಿಕ ವಸ್ತುವನ್ನೊಳಗೊಂಡ ಪ್ರಹಸನವನ್ನು ಪ್ರದರ್ಶಿಸಿದರು. 


ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ವಿದ್ಯಾರ್ಥಿನಿಯರಾದ  ಅಕ್ಷಿತಾ ಸ್ವಾಗತಿಸಿ, ಅರ್ಪಿತಾ ವಂದಿಸಿದರು. ಮೋಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top