ಕರಾವಳಿಗೆ ರೆಡ್ ಅಲರ್ಟ್‌: ದ.ಕ ಜಿಲ್ಲೆಯಾದ್ಯಂತ ನಾಳೆ (ಆ.18) ಶಿಕ್ಷಣ ಸಂಸ್ಥೆಗಳಿಗೆ ರಜೆ

Upayuktha
0

ಫೈಲ್ ಫೋಟೋ


ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆಯಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ತುರ್ತು ಕ್ರಮಗಳನ್ನು ಕೈಗೊಂಡಿದೆ.


1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 18-08-2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.



5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top